alex Certify BIG NEWS : ಶಾಲೆಯ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಾಲೆಯ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಸುತ್ತೋಲೆ

ಬೆಂಗಳೂರು :   ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’  ಮಹತ್ವದ ಸುತ್ತೋಲೆ ಹೊರಡಿಸಿದೆ.

ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, 2023-24ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಜುಲೈ-2023 ರಿಂದ ಅವಕಾಶ ಕಲ್ಪಿಸಿದ್ದು, ನಾಲ್ಕನೇ ಬಾರಿಗೆ ಅವಧಿ ವಿಸ್ತರಿಸಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆಡಳಿತ ಮಂಡಳಿಗೆ ದಿನಾಂಕ:16-12-2023 ರವರೆಗೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಹಲವಾರು ಶಾಲೆಗಳು ನೀಡಿರುವ ಕಾಲಾವಕಾಶದಲ್ಲಿ ಅರ್ಜಿ ಸಲ್ಲಿಸದೇ ಪುನ: ಮಾನ್ಯತೆ ನವೀಕರಣಕ್ಕೆ, ಅರ್ಜಿ ಸಲ್ಲಿಸಲು ಅವಕಾಶ ಕೋರಿ ಈ ಕಚೇರಿಗೆ ಮನವಿ ಸಲ್ಲಿಸುತ್ತಿರುವುದನ್ನು ಗಮನಿಸಲಾಗಿದೆ.

ಈ ಪ್ರಯುಕ್ತ 2023-24ನೇ ಸಾಲಿನಲ್ಲಿ ಮಾನ್ಯತೆ ನವೀಕರಣಕ್ಕೆ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕಚೇರಿಯಲ್ಲಿ ಸ್ವೀಕೃತಿಯಾಗಿರುವ ಮನವಿಗಳಂತೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಪರೀಕ್ಷಾ ಹಿತದೃಷ್ಟಿಯಿಂದ ಹಾಗೂ ಆರ್.ಟಿ.ಇ ಶುಲ್ಕ ಮರುಪಾವತಿ ಸಂಬಂಧ ವರಿಶೀಲಿಸಿದ್ದು, 2021-22 ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣವಾಗದಿರುವಂತಹ ಶಾಲೆಗಳಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಹಾಗೂ 2023-24ನೇ ಸಾಲಿಗೆ ಶಾಲೆಗಳು ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕಾಗಿ ಅರ್ಜಿ ಸಲ್ಲಿಸಲು ದಿ:10-01-2024 ರಿಂದ ದಿನಾಂಕ:19-01-2024 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಈವರೆವಿಗೂ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣ ಪಡೆದಿರುವ ಶಾಲಾ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಲು ಅಂತಿಮ ಅವಕಾಶ ನೀಡಿದ್ದು, ನಿಗದಿತ ದಿನಾಂಕದೊಳಗೆ ಸೂಕ್ತ ದಾಖಲೆಗಳೊಂದಿಗೆ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಮಾನ್ಯತೆ ಪಡೆಯುವಂತೆ ಸೂಚನೆ ನೀಡಲಾಗಿದೆ.

ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಈವರೆಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸದಿರುವ ಮತ್ತು ಈಗಾಗಲೇ ಅರ್ಜಿ ಸಲ್ಲಿಸಿ ತಿರಸ್ಕೃತಗೊಂಡಿರುವ ಶಾಲಾ ಆಡಳಿತ ಮಂಡಳಿಗೆ ವ್ಯಾಪಕ ಪ್ರಚಾರ ಮತ್ತು ಎಚ್ಚರಿಕೆ ಪತ್ರ ನೀಡಿ ನಿಗದಿತ ದಿನಾಂಕದೊಳಗೆ ಮಾನ್ಯತೆ ನವೀಕರಣ ತಂತ್ರಾಂಶದ ಮೂಲಕವೇ ಸಂಸ್ಕರಣಾ ಶುಲ್ಕ ಪಾವತಿಸಿ ಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಅರ್ಜಿಸಲ್ಲಿಸಲು ತಿಳಿಸುವುದು. ಅಂತಹ ಎಲ್ಲಾ ಶಾಲೆಗಳು SATS ತಂತ್ರಾಂಶದಲ್ಲಿ ಮುಂಚಿತವಾಗಿಯೇ ಸಂಬಂಧಿಸಿದ ದಾಖಲೆಗಳನ್ನು ಅಪ್ ಲೋಡ್ ಮಾಡುವಂತೆ ಸೂಚನೆ ನೀಡಲು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...