alex Certify BREAKING : ಅ.19 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅ.19 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಅಕ್ಟೋಬರ್ 19 ರಂದು ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಈ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ. ದಿನಾಂಕ: 19.10.2023, ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 11 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆ, ವಿಪಕ್ಷಗಳ ಟೀಕೆ, ಅನುದಾನ ಬಿಡುಗಡೆ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ವಿವಿಧ ಇಲಾಖೆಗಳಿಗೆ ಅನುದಾನ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...