ಬೆಂಗಳೂರು : ಆಗಸ್ಟ್ 10 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ವಿಧಾನಸೌಧದ ಸಚಿವ ಸಂಪುಟದ ಸಭಾ ಮಂದಿರದಲ್ಲಿ ಆಗಸ್ಟ್ 10 ರಂದು ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿಯೇ ಅನುಷ್ಟಾನಗೊಳಿಸುತ್ತಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಅದೇ ರೀತಿ ಹಲವು ಯೋಜನೆಗಳ ಅನುಷ್ಟಾನ ಹಾಗೂ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಸಂಬಂಧ ಸರ್ಕಾರ ಮಹತ್ವದ ಚರ್ಚೆ ನಡೆಸಲಿದೆ ಎನ್ನಲಾಗಿದೆ.
BBMP ಕಾಮಗಾರಿ ಅಕ್ರಮ; ತನಿಖೆಗೆ ಪ್ರತ್ಯೇಕ ಸಮಿತಿ ರಚನೆ
ಬೆಂಗಳೂರು: ಬಿಬಿಎಂಪಿ ಕಾಮಗಾರಿಯಲ್ಲಿ ನಡೆದ ಅಕ್ರಮ ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.’2019-20ನೇ ಸಾಲಿನಿಂದ 2022-23ನೇ ಸಾಲಿನವರೆಗೆ ನಡೆದ ಕಾಮಗಾರಿಗಳ ಅಕ್ರಮ, ಗುತ್ತಿಗೆದಾರರನ್ನು ಬಿಟ್ಟು ನಕಲಿ ಗುತ್ತಿಗೆದರರಿಗೆ ಹಣ ಪಾವತಿ, ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ, ನಕಲಿ ಬಿಲ್ ಸೃಷ್ಟಿ ಸೇರಿದಂತೆ ವಿವಿಧ ಪ್ರಕರಣಗಳ ತನಿಖೆಗೆ ಸಮಿತಿ ರಚಿಸಲಾಗಿದೆ.
ಘನತ್ಯಾಜ್ಯ ನಿರ್ವಹಣೆ ಕಾಮಗಾರಿ ಅಕ್ರಮ ತನಿಖೆಗೆ ಉಜ್ವಲ್ ಕುಮಾರ್ ಘೋಷ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿ ಅಕ್ರಮದ ತನಿಖೆಗೆ ಆಮ್ಲನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ, ಬೃಹತ್ ನೀರುಗಾಲುವೆ ಅಕ್ರಮ ತನಿಖೆಗೆ ಪಿ.ಸಿ ಜಾಫರ್ ಅಧ್ಯಕ್ಷತೆಯಲ್ಲಿ, ಕೆರೆ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಕಾಮಗಾರಿ ತನಿಖೆಗೆ ಡಾ. ವಿಶಾಲ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.