ಬೆಂಗಳೂರು : ಮಾ.11ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿಯಾಗಿದ್ದು, ಕುಡಿಯುವ ನೀರು, ಬರಗಾಲ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 11-03-2024ರ ಸೋಮವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 8ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ, ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ, ಬರಗಾಲ, ವಿವಿಧ ಕಾಮಗಾರಿ ಹಾಗೂ ಯೋಜನೆಗಳಿಗೆ ಅನುಮೋದನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು , ಶಾಸಕರು ಹಾಜರಿರಲಿದ್ದಾರೆ.