ಬೆಂಗಳೂರು : ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಹಿಂದುಳಿದ ವರ್ಗದ ಮೀಸಲಾತಿ ಸಂಬಂಧ, ಜಾತಿ ಗಣತಿ , ಕಾವೇರಿ ನದಿ ವಿವಾದ ಸೇರಿ ಹಲವು ಮಹತ್ವದ ವಿಚಾರಗಳು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ತಿಳಿದು ಬಂದಿದೆ.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂತ್ರಿ ಮಂಡಲದ ಸಚಿವರು, ಶಾಸಕರು, ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಕೂಡ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.