ಬೆಂಗಳೂರು : ಮುಂದಿನ ದಿನದಲ್ಲಿ ಓರ್ವ ಐಪಿಎಸ್ ಅಧಿಕಾರಿ ಅರೆಸ್ಟ್ ಆಗ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿರುವ ಬಸನಗೌಡ ಯತ್ನಾಳ್ ಮುಂದಿನ ದಿನದಲ್ಲಿ ಓರ್ವ ಐಪಿಎಸ್ ಅಧಿಕಾರಿ ಅರೆಸ್ಟ್ ಆಗ್ತಾರೆ ಎಂದು ಹೇಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿದೆ.
ರಾಜಕಾರಣದಲ್ಲಿ ನನ್ನ ತುಳಿಯುತ್ತಿದ್ದಾರೆ ಎಂದು ಕಿಡಿಕಾರಿದ ಯತ್ನಾಳ್ ಸೋಶಿಯಲ್ ಮೀಡಿಯಾದಲ್ಲಿ ಯಾರು ವಿರೋಧ ಪಕ್ಷ ನಾಯಕನಾಗಬೇಕು? ಯಾರು ರಾಜ್ಯಾಧ್ಯಕ್ಷರಾಗಬೇಕು ಎಂದು ಕೇಳಿದಾಗ ಎಲ್ಲರು ಯತ್ನಾಳ್ ಮಾಡಿ ಅಂದ್ರು.. ಆದರೆ ಕೆಲವರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ನನಗೆ ಅಡ್ಡಗಾಲು ಹಾಕಿದರು ಎಂದು ಸ್ವಪಕ್ಷದ ವಿರುದ್ಧವೇ ಯತ್ನಾಳ್ ಅಸಮಾಧಾನ ಹೊರ ಹಾಕಿದ್ದಾರೆ.