ಬೆಂಗಳೂರು : ಬೆಂಗಳೂರಿನ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ಬಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವ ಹಿನ್ನೆಲೆ ಆಸ್ಪತ್ರೆಯನ್ನು ಪೊಲೀಸರು ತಾತ್ಕಾಲಿಕವಾಗಿ ಬಂದ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ಗ್ರಾಮಾತರ ಜಿಲ್ಲೆಯ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣ ಹತ್ಯೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿ ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧವಿದ್ದರೂ ಈ ಆಸ್ಪತ್ರೆಯ ವೈದ್ಯರು 74 ಭ್ರೂಣ ಹತ್ಯೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರವಿಕುಮಾರ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ನಡೆಸಿದಾಗ ಭ್ರೂಣ ಹತ್ಯೆ ದಂಧೆ ನಡೆಸಿರುವುದು ಬಯಲಾಗಿದೆ.
ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಡಾ. ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.