ಬೆಂಗಳೂರು : ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ! ಮುಡಾ ಹಗರಣ ಖಂಡಿಸಿ, ಮೈಸೂರಿನಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಭೆಗೆ ತೆರಳುತ್ತಿದ್ದ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ ಹಾಗೂ ಪಕ್ಷದ ಸಂಸದರು, ಶಾಸಕರು, ಮಾಜಿ ಸಂಸದರು, ಮಾಜಿ ಶಾಸಕರು, ಪಕ್ಷದ ಹಿರಿಯ ನಾಯಕರು ಹಾಗೂ ಕಾರ್ಯಕರ್ತರನ್ನು ಬೆಂಗಳೂರಿನಲ್ಲೇ ರಣಹೇಡಿ ಕಾಂಗ್ರೆಸ್ ಸರ್ಕಾರ ಬಂಧಿಸಿದೆ.
ಮಾತೆತ್ತಿದರೆ ಸಂವಿಧಾನ ರಕ್ಷಣೆ, ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಡಾಯಿಕೊಚ್ಚಿಕೊಳ್ಳುವ ಸಿಎಂ ಸಿದ್ದರಾಮಯ್ಯನವರು ತಮ್ಮ ಖುರ್ಚಿ ಉಳಿಸಿಕೊಳ್ಳಲು, ವಿಪಕ್ಷಗಳ ಹೋರಾಟ ಹತ್ತಿಕ್ಕುವ ಮೂಲಕ ಸರ್ವಾಧಿಕಾರಿ ನಡೆ ಪ್ರದರ್ಶನ ಮಾಡಿದ್ದಾರೆ. ಮುಡಾ ಹಗರಣದಲ್ಲಿ ತಮ್ಮ ಪಾತ್ರವಿರುವುದನ್ನು ಒಪ್ಪಿಕೊಳ್ಳದ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹತ್ತಿಕ್ಕುವ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ದೇಶದ ಜನರ ದಾರಿ ತಪ್ಪಿಸಲು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಕೈಯಲ್ಲಿ ಸಂವಿಧಾನ ಪ್ರತಿ ಪ್ರದರ್ಶನ ಮಾಡುತ್ತಾರೆ. ಶ್ರೇಷ್ಠ ಸಂವಿಧಾನವೇ ವಿಪಕ್ಷಗಳಿಗೆ ಅನ್ಯಾಯದ ವಿರುದ್ಧ ಪ್ರತಿಭಟಿಸುವ, ಹೋರಾಟ ನಡೆಸುವ ಸ್ವಾತಂತ್ರ್ಯ ನೀಡಿದೆ ಎಂಬ ಅರಿವಿಲ್ಲ. ಸಂವಿಧಾನ ವಿರೋಧಿ ಸಿದ್ದರಾಮಯ್ಯನವರೇ ತಮ್ಮ ಸರ್ವಾಧಿಕಾರಿ ನಡೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುವುದು ಶತಸಿದ್ಧ. ನೀವು ಹಾಗೂ ನಿಮ್ಮ ಸಂಪುಟದ ಭ್ರಷ್ಟ ಸಚಿವರುಗಳು ರಾಜೀನಾಮೆ ನೀಡಿ ಮನೆಗೆ ಹೋಗುವ ಕಾಲ ಸನ್ನಿಹಿತವಾಗುತ್ತಿದೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.