ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಮಾರಿಕಾಂಬ ನಗರದ ಅಂಗನವಾಡಿ ಕೇಂದ್ರದಲ್ಲಿ ವಿಷಪೂರಿತ ಹಾವು ಕಚ್ಚಿನ 4 ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ.
ಮಯೂರಿ ಸುರೇಶ ಕುಂಬ್ಳೆಪ್ಪನವರ ಮೃತಪಟ್ಟ ಮಗು. ಅಂಗನವಾಡಿಗೆ ಆಗಮಿಸಿದ್ದ ಮಯೂರಿ ಹೊರಗಿದ್ದ ಶೌಚಾಲಯಕ್ಕೆ ಮೂತ್ರ ವಿಸರ್ಜನೆಗೆ ತೆರಳುವ ಮಾರ್ಗದಲ್ಲಿ ಕಾಲಿಗೆ ಹಾವು ಕಚ್ಚಿದೆ. ಬಳಿಕ ಮಗುವನ್ನು ಮುಂಡಗೋಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯನಾಗಿದೆ. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲಿ ಮಗು ಸಾವನ್ನಪ್ಪಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.