alex Certify BREAKING: ಉಪ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಉಪ ಸ್ಪೀಕರ್ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಉಪ ಸ್ಪೀಕರ್ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ಕ್ಷೇತ್ರದ ಬಿಜೆಪಿ ಶಾಸಕರಾದ ಆನಂದ ಮಾಮನಿ ಕೆಲವು ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳ ಹಿಂದೆ ಅವರನ್ನು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಅಥವಾ ನಾಳೆ ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...