ಬೆಂಗಳೂರು: ಡೆಪ್ಯುಟಿ ಸ್ಪೀಕರ್ ಆನಂದ ಮಾಮನೊ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಮುಂದೂಡಲಾಗಿದೆ.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಕಿತ್ತೂರು ಉತ್ಸವವನ್ನು ನಾಳೆಗೆ ಮುಂದೂಡಿದ್ದಾರೆ. ಕಿತ್ತೂರಿನಲ್ಲಿ ಇಂದು ಕಿತ್ತೂರು ಉತ್ಸವ ಆಯೋಜಿಸಲಾಗಿತ್ತು. ಆನಂದ ಮಾಮನಿ ನಿಧನದ ಹಿನ್ನೆಲೆಯಲ್ಲಿ ಇಂದಿನ ಕಾರ್ಯಕ್ರಮವನ್ನು ನಾಳೆಗೆ ಮುಂದೂಡಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಉತ್ಸವ ಆಯೋಜಿಸಲಾಗಿತ್ತು.
ಬಿಜೆಪಿ ಜನಸಂಕಲ್ಪ ಸಮಾವೇಶ ಮುಂದೂಡಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ಮತ್ತು ಚಿತ್ತಾಪುರದಲ್ಲಿ ಇಂದು ಬಿಜೆಪಿ ಜನಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು. ಆನಂದ ಮಾಮನಿ ನಿಧನದ ಹಿನ್ನಲೆಯಲ್ಲಿ ಸಮಾವೇಶ ಮುಂದೂಡಲಾಗಿದ್ದು, ನವೆಂಬರ್ 6 ರಂದು ಆಳಂದ ಮತ್ತು ಚಿತ್ತಾಪುರದಲ್ಲಿ ಸಮಾವೇಶ ನಡೆಯಲಿದೆ.