ನವದೆಹಲಿ: ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಜಿ 23 ಸಹವರ್ತಿ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಪಕ್ಷದ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಶರ್ಮಾ, ಪಕ್ಷದ ಯಾವುದೇ ಸಭೆಗಳಿಗೆ ತಮ್ಮನ್ನು ಆಹ್ವಾನಿಸದ ಕಾರಣ ಅವರ ಆತ್ಮಗೌರವಕ್ಕೆ ಧಕ್ಕೆಯಾಗಿರುವುದರಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ಸ್ವಾಭಿಮಾನ ಸಂಧಾನಕ್ಕೆ ಸಾಧ್ಯವಾಗಲ್ಲ ಎಂಬ ಕಾರಣದಿಂದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದ ಹಿರಿಯ ನಾಯಕ ಶರ್ಮಾ ಅವರ ರಾಜೀನಾಮೆ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಉರುಳಿಸುವ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ.
ಮಾಜಿ ಕೇಂದ್ರ ಸಚಿವರು ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನ ಉಪ ನಾಯಕರಾಗಿದ್ದು, ಅವರನ್ನು ಏಪ್ರಿಲ್ 26 ರಂದು ಹಿಮಾಚಲ ಪ್ರದೇಶದ ಸ್ಟೀರಿಂಗ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಆಜಾದ್ ಮತ್ತು ಶರ್ಮಾ ಇಬ್ಬರೂ ಪಕ್ಷದ ನಾಯಕತ್ವದ ನಿರ್ಧಾರಗಳನ್ನು ಟೀಕಿಸುವ G23 ಗುಂಪಿನ ಪ್ರಮುಖ ನಾಯಕರಾಗಿದ್ದಾರೆ.