alex Certify BIG BREAKING: ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ಕೇಳಿದ ಖಾತೆ ಕೊಡದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ, ಕೇಳಿದ ಖಾತೆ ಕೊಡದಿದ್ರೆ ಸಚಿವ ಸ್ಥಾನಕ್ಕೆ ರಾಜೀನಾಮೆ..?

ಬೆಂಗಳೂರು: ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಖಾತೆ ಹಂಚಿಕೆ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿದ್ದ ಶಾಸಕರ ಕಚೇರಿ ತೆರವುಗೊಳಿಸಿದ್ದಾರೆ. ಪ್ರಭಾವಿ ಖಾತೆ ಪಡೆಯಲು ಒತ್ತಡ ತಂತ್ರ ಅನುಸರಿಸಿದ್ದಾರೆ ಎನ್ನಲಾಗಿದೆ.

ತಮಗೆ ಇಷ್ಟವಾದ ಖಾತೆ ಕೊಡದಿದ್ದರೆ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇದರೊಂದಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಆಪ್ತರ ಬಳಿ ಹೇಳಿದ್ದಾರೆನ್ನಲಾಗಿದೆ.

ಖಾತೆ ಬದಲಾವಣೆಗಾಗಿ ಸಿಎಂ ಭೇಟಿಯಾಗಿದ್ದ ಆನಂದ್ ಸಿಂಗ್ ಕೇಳಿದ ಖಾತೆ ಕೊಡದಿದ್ದರೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...