
ಬೆಂಗಳೂರು: ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಮಾಜಿ ಸಚಿವ ಆನಂದ್ ಸಿಂಗ್ ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಬಳ್ಳಾರಿಯ ವ್ಯಾಸನಕೆರೆ ಗಣಿಯಿಂದ ಅಕ್ರಮವಾಗಿ ಅದಿರು ಸಾಗಣೆ ಕೇಸ್ ನಲ್ಲಿ ಆನಂದ್ ಸಿಂಗ್ ಅವರನ್ನು ಖುಲಾಸೆಗೊಳಿಸಲಾಗಿದೆ. ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾ. ಸಂತೋಷ್ ಗಜಾನನ ಭಟ್, ಆನಂದ್ ಸಿಂಗ್ ವಿರುದ್ಧದ ಪ್ರಕರಣ ಖುಲಾಸೆಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇದೇ ಪ್ರಕರಣದಲ್ಲಿ ಗೋವಾ ಸಚಿವ ರೋಷನ್ ಕೌಂಟೆಗೂ ರಿಲೀಫ್ ಸಿಕ್ಕಿದೆ ಎಂದು ತಿಳಿದುಬಂದಿದೆ.