
ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ. ಹೊಸಪೇಟೆ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚು ಅನುದಾನ ನೀಡಿದ್ದಾರೆ.
228.94 ಕೋಟಿಯ ರೂ. ಮೊತ್ತದ ವಿವಿಧ ಯೋಜನೆಗಳನ್ನು ಹೊಸಪೇಟೆ ಕ್ಷೇತ್ರಕ್ಕೆ ನೀಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಿದ್ದ ಸಂದರ್ಭದಲ್ಲಿ ಜಿಲ್ಲೆ ಬದಲಾವಣೆ ಮಾಡಿದ್ದರಿಂದ ಆನಂದ್ ಸಿಂಗ್ ಮುನಿಸಿಕೊಂಡಿದ್ದರು. ಅವರ ಮುನಿಸು ತಣಿಸಲು ಬಂಪರ್ ಕೊಡುಗೆ ನೀಡಲಾಗಿದೆ ಎಂದು ಹೇಳಲಾಗಿದೆ.