
ಹೊಸಪೇಟೆ: ವಿಜಯನಗರ ಜಿಲ್ಲೆ ಉಸ್ತುವಾರಿ ನೀಡುವಂತೆ ಆಗ್ರಹಿಸಿ, ಕೊರೋನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಸಚಿವ ಆನಂದ್ ಸಿಂಗ್ ಬೆಂಬಲಿಗರ ವಿರುದ್ಧ ದೂರು ದಾಖಲಾಗಿದೆ.
ವಿಜಯನಗರ ಜಿಲ್ಲೆ ಉಸ್ತುವಾರಿ ನೀಡುವಂತೆ ಆಗ್ರಹಿಸಿ ಹೊಸಪೇಟೆಯಲ್ಲಿ ಆನಂದ ಸಿಂಗ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದ ಸಚಿವ ಆನಂದ್ ಸಿಂಗ್ ಅವರ 30 ಬೆಂಬಲಿಗರ ವಿರುದ್ಧ ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆನಂದ್ ಸಿಂಗ್ ಅವರ ಬಳಿಯಿದ್ದ ಬಳ್ಳಾರಿ, ವಿಜಯನಗರ ಜಿಲ್ಲಾ ಉಸ್ತುವಾರಿಯನ್ನು ಬದಲಾವಣೆ ಮಾಡಿ ಅವರಿಗೆ ಕೊಪ್ಪಳ ಜಿಲ್ಲೆ ಉಸ್ತುವಾರಿ ನೀಡಲಾಗಿದೆ. ಶಶಿಕಲಾ ಜೊಲ್ಲೆ ಅವರಿಗೆ ವಿಜಯನಗರ ಜಿಲ್ಲೆ ಉಸ್ತುವಾರಿ ನೀಡಲಾಗಿದೆ.