ಬೆಂಗಳೂರು: ಸಚಿವರ ಪಟ್ಟಿ ಬಿಡುಗಡೆಗೆ ಮುನ್ನವೇ ಭಿನ್ನಮತ ಉಂಟಾಗಿದೆ. ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವುದಾಗಿ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಹೇಳಿದ್ದಾರೆ.
ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆನಂದ ಮಾಮನಿ ತಿಳಿಸಿದ್ದಾರೆ. ಸಚಿವರ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ನೂತನ ಸಚಿವರ ಪ್ರಮಾಣವಚನಕ್ಕೆ ಮೊದಲೇ ರಾಜೀನಾಮೆ ನೀಡಲು ಆನಂದ ಮಾಮನಿ ಮುಂದಾಗಿದ್ದು ಶಾಸಕರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.
ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರಾಗಿರುವ ಆನಂದ ಮಾಮನಿ ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆಗಿದ್ದಾರೆ. ಅವರು ಸಚಿವ ಸ್ಥಾನಾಕಾಂಕ್ಷಿಯಾಗಿದ್ದು, ತಮಗೆ ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆನ್ನಲಾಗಿದೆ.