alex Certify ಹಿಂದುತ್ವ ಪ್ರತಿಪಾದಕರಿಗೆ ತಪ್ಪಿದ ಟಿಕೆಟ್: ಚರ್ಚೆಗೆ ಕಾರಣವಾದ ಬಿಜೆಪಿ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುತ್ವ ಪ್ರತಿಪಾದಕರಿಗೆ ತಪ್ಪಿದ ಟಿಕೆಟ್: ಚರ್ಚೆಗೆ ಕಾರಣವಾದ ಬಿಜೆಪಿ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಳೆದು ತೂಗಿ ಟಿಕೆಟ್ ಹಂಚಿಕೆ ಮಾಡಿದೆ. ಗೆಲುವಿನ ಮಾನದಂಡದೊಂದಿಗೆ ರಾಜಕೀಯ ಲೆಕ್ಕಾಚಾರದೊಂದಿಗೆ ಅನೇಕ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗಿದೆ. ಆದರೆ, ಉಗ್ರ ಹಿಂದುತ್ವ ಪ್ರತಿಪಾದಕರಿಗೆ ಈ ಬಾರಿ ಟಿಕೆಟ್ ಕೈತಪ್ಪಿರುವುದರಿಂದ ಬಿಜೆಪಿ ನಡೆ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಲಾಗುವುದಾಗಿ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ. ಸತತ 7 ಬಾರಿ ಅಭ್ಯರ್ಥಿಯಾಗಿದ್ದ 6 ಬಾರಿ ಜಯಗಳಿಸಿದ್ದ ಅನಂತಕುಮಾರ್ ಹೆಗಡೆ ಉಗ್ರ ಹಿಂದುತ್ವ ಪ್ರತಿಪಾದಕರಾಗಿದ್ದರು. ಅವರಿಗೆ ಟಿಕೆಟ್ ಕೈತಪ್ಪಿದೆ.

ತಮ್ಮ ವಿವಾದಿತ ಹೇಳಿಕೆಗಳ ಮೂಲಕ ಬಿಜೆಪಿಗೆ ಮುಜುಗರ ಉಂಟು ಮಾಡಿದ ಅನಂತ್ ಕುಮಾರ್ ಹೆಗಡೆಗೆ ಈ ಬಾರಿ ಟಿಕೆಟ್ ನಿರಾಕರಿಸಲಾಗಿದೆ. ಇನ್ನು ಹಿಂದುತ್ವ ಪ್ರತಿಪಾದಕರಾದ ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅವರಿಗೂ ಟಿಕೆಟ್ ನಿರಾಕರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...