ಕಾರವಾರ: ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಸದಸ್ಯ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆನ್ನುನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಅನಂತ್ ಕುಮಾರ್ ಹೆಗಡೆ ಕಳೆದ ಚುನಾವಣೆ ವೇಳೆಯಲ್ಲಿಯೇ ಇಂತಹ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿದೆ. ಸದ್ಯ ಅವರು ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾರ್ವಜನಿಕರ ಭೇಟಿಗೆ ಅನಂತ್ ಕುಮಾರ್ ಹೆಗಡೆ ಲಭ್ಯವಿರುವುದಿಲ್ಲ ಎಂದು ಹೇಳಲಾಗಿದೆ.
ಬೆನ್ನುನೋವು ಮತ್ತು ಕಾಲು ನೋವು ಉಲ್ಬಣವಾದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ವಿಶ್ರಾಂತಿಯಲ್ಲಿರುವ ಅವರು ರಾಜಕೀಯ ನಿವೃತ್ತಿ ಹೊಂದುವ ಚಿಂತನೆಯಲ್ಲಿದ್ದಾರೆ ಎಂದು ಹೇಳಲಾಗಿದೆ.