alex Certify ‘ಸಿಎಂ ಅವಹೇಳನ: ಅನಂತ್ ಕುಮಾರ್ ಹೆಗಡೆ ಬಂಧನ ಬಗ್ಗೆ ಪೊಲೀಸರ ನಿರ್ಧಾರ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿಎಂ ಅವಹೇಳನ: ಅನಂತ್ ಕುಮಾರ್ ಹೆಗಡೆ ಬಂಧನ ಬಗ್ಗೆ ಪೊಲೀಸರ ನಿರ್ಧಾರ’

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಕುಮಟಾದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕ್ಷ್ಯ ಸಂಗ್ರಹಿಸಿ ಅನಂತ್ ಕುಮಾರ್ ಹೆಗಡೆ ಅವರನ್ನು ಬಂಧಿಸಬೇಕೋ ಬೇಡವೋ ಎನ್ನುವ ಬಗ್ಗೆ ಸ್ಥಳೀಯ ಪೊಲೀಸರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಅನಂತ್ ಕುಮಾರ್ ಹೆಗಡೆ ವಿರುದ್ಧ ಯಾವ ಸೆಕ್ಷನ್ ಅಡಿ ಪ್ರಕರಣ ದಾಖಲಿಸಬೇಕು ಎಂಬುದು ಸೇರಿದಂತೆ ಎಲ್ಲವನ್ನು ಸ್ಥಳೀಯ ಪೊಲೀಸರು ತೀರ್ಮಾನಿಸಲಿದ್ದಾರೆ. ಪೊಲೀಸರಿಗೆ ಯಾವುದೇ ರೀತಿಯ ನಿರ್ದೇಶನ ನೀಡಿರುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿದೆ. ಗೃಹ ಸಚಿವನಾಗಿ ಕಾನೂನುಬಾಹಿರವಾಗಿದ್ದರೂ ಪರವಾಗಿಲ್ಲ ಎಂದು ಹೇಳಲಾಗದು. ಪೊಲೀಸರು ಕಾನೂನಾತ್ಮಕವಾಗಿ ಕೈಗೊಂಡ ಕ್ರಮವನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...