
ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಟ್ರಕ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಪ್ರವಹಿಸಿ ಚಾಲಕ ಸಾವನ್ನಪ್ಪಿದ್ದಾರೆ.
ಭಾರಿ ಬೆಂಕಿಗೆ ಟ್ರಕ್ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಚಾಲಕನ ಮೃತದೇಹವನ್ನು ಮೈಲವರಂ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ. ಟ್ರಕ್ ಗೆ ಬೆಂಕಿ ತಗುಲಿದೆ ವಿಡಿಯೋ ಜಾಲತಾಣಗಳಲ್ಲಿ ಹರಿದಾಡಿದೆ.