
ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ತಿರುಪತಿ ರೂಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 11 ಸೋಂಕಿತರು ಸಾವನ್ನಪ್ಪಿದ್ದಾರೆ.
ನಿನ್ನೆ ಸಂಜೆಯ ನಂತರದಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿ 11 ಮಂದಿ ಸಾವನ್ನಪ್ಪಿದ್ದು, ಘಟನೆಯ ಬಳಿಕ ವೈದ್ಯರು, ಸಿಬ್ಬಂದಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಸಂಬಂಧಿಕರು ಐಸಿಯು ವಾರ್ಡ್ ಗೆ ನುಗ್ಗಿದ್ದಾರೆ ಆಕ್ರೋಶದಿಂದ ಆಸ್ಪತ್ರೆಯಲ ಗಾಜು, ಸಾಮಗ್ರಿಗಳನ್ನು ಹಾನಿಗೊಳಿಸಿದ್ದಾರೆ.