
ಆಂಧ್ರಪ್ರದೇಶದ ಅನಂತಪುರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರ್ ಗೆ ಲಾರಿ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ಹೇಳಲಾಗಿದೆ. ಕಾರ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.