ವಿಶಾಖಪಟ್ಟಣ: 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕೋರೋಣ ಲಸಿಕೆ ನೀಡಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ದೇಶದ ಅನೇಕ ರಾಜ್ಯಗಳಲ್ಲಿ ಉಚಿತ ಲಸಕೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಆಂಧ್ರಪ್ರದೇಶದಲ್ಲಿ ಕೂಡ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಜಗನ್ ಮೋಹನ್ ರೆಡ್ಡಿ ಕಚೇರಿಯಿಂದ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.