ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಔಷಧೀಯ ಘಟಕದಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿಯ ಘಟಕದಲ್ಲಿ ಈ ಘಟನೆ ನಡೆದಿದೆ. ಫಾರ್ಮಾ ಸಂಸ್ಥೆಯ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಿಂದ ಭಾರಿ ಹಾನಿಯಾಗಿದೆ. ಅಗ್ನಿಶಾಮಕ, ತುರ್ತು ಸೇವೆಗಳು ಘಟನಾ ಸ್ಥಳಕ್ಕೆ ತ್ವರಿತವಾಗಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಗಾಯಾಳುಗಳನ್ನು ತಕ್ಷಣ ಎನ್‌ಟಿಆರ್ ಆಸ್ಪತ್ರೆ ಮತ್ತು ಇತರ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಸಾಗಿಸಲಾಯಿತು.
ಅನಕಾಪಲ್ಲಿ ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ಮಾತನಾಡಿ, ಎಸ್ಸೆಂಟಿಯಾ ಫಾರ್ಮಾ ಪ್ಲಾಂಟ್‌ನಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಾವು ನಾಲ್ಕು ಉದ್ಯೋಗಿಗಳನ್ನು ಕಳೆದುಕೊಂಡಿದ್ದೇವೆ. ಈ ಘಟನೆಯು ರಿಯಾಕ್ಟರ್ ಸ್ಫೋಟದಿಂದ ಸಂಭವಿಸಿಲ್ಲ. ಇದು ವಿದ್ಯುತ್ ಸಂಬಂಧಿತ ಬೆಂಕಿ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಸುಮಾರು 30 ಗಾಯಾಳುಗಳನ್ನು ಅನಕಪಲ್ಲಿ ಮತ್ತು ಅಚ್ಚುತಪುರಂನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಘಟಕದಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.