ಆಂಧ್ರಪ್ರದೇಶದಲ್ಲಿ ಸರ್ಕಾರಿ ನೌಕರರ ನಿವೃತ್ತಿ ಮಿತಿಯನ್ನು 2 ವರ್ಷ ಹೆಚ್ಚಿಸಲಾಗಿದೆ. ಈ ಮೂಲಕ ಆಂಧ್ರಪ್ರದೇಶದಲ್ಲಿ ಸರ್ಕಾರಿ ಉದ್ಯೋಗ ಮಾಡುತ್ತಿರುವ ರಾಜ್ಯ ನೌಕರರಿಗೆ ಸರ್ಕಾರ ಭರ್ಜರಿ ಉಡುಗೊರೆ ನೀಡಿದೆ.
ವೈಎಸ್ಆರ್ ಕಾಂಗ್ರೆಸ್ ಸರ್ಕಾರ ನೌಕರರ ನಿವೃತ್ತಿ ವಯಸ್ಸನ್ನು 2 ವರ್ಷ ಹೆಚ್ಚಿಸಿದೆ. ಈಗ ರಾಜ್ಯ ನೌಕರರು 60 ರ ಬದಲಿಗೆ 62 ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ. ಆಂಧ್ರಪ್ರದೇಶದ ರಾಜ್ಯಪಾಲ ವಿಶ್ವಭೂಷಣ ಹರಿಚಂದನ್ ಸೋಮವಾರ ಈ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಉದ್ಯೋಗಿಗಳು ಜನವರಿ 1, 2022 ರಿಂದ 62 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಸೌಲಭ್ಯವನ್ನು ಪಡೆಯುತ್ತಾರೆ.