
ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಜುತ್ತಾಡದಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಉಷಾರಾಣಿ, ರಮಾದೇವಿ, ಅರುಣ, ರಮಣ ಮಕ್ಕಳಾದ ಉದಯ, ಊರ್ವಿ ಅವರನ್ನು ದುಷ್ಕರ್ಮಿಗಳು ಹತ್ಯೆಮಾಡಿದ್ದಾರೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು 6 ಮಂದಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆನ್ನಲಾಗಿದೆ.
ಅಪ್ಪಲರಾಜು ಎಂಬುವನ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.