
ನವದೆಹಲಿ: ಲೋಕಸಭೆ ಚುನಾವಣೆಯ ಜೊತೆಗೆ ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆಯ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ಮುಂದುವರಿದಿದೆ.
ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಲ್ಲಿ ತೆಲುಗು ದೇಶಂ ಪಾರ್ಟಿ 124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷ 22. ಜನಸೇನಾ ಪಕ್ಷ 19. ಬಿಜೆಪಿ 6 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿವೆ.
ಒಡಿಶಾ ವಿಧಾನಸಭೆಯಲ್ಲಿ 147 ಸ್ಥಾನಗಳಲ್ಲಿ ಬಿಜೆಪಿ 68, ಬಿಜೆಡಿ 45, ಕಾಂಗ್ರೆಸ್ 13 ಜೆಪಿಪಿ 1 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ.