ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಗಜಪತಿನಗರ ಮಂಡಲದ ಮಧುಪಾದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಿಲ್ ನೀರುಕೊಂಡ ದಂತ ವಿಜ್ಞಾನ ಸಂಸ್ಥೆಯ ಬಸ್ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಒಡಿಶಾದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ, ಹಲವಾರು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ. ಸಹಾಯಕ್ಕಾಗಿ ಐದು ‘108 ಆಂಬ್ಯುಲೆನ್ಸ್ ವಾಹನಗಳು ಸ್ಥಳಕ್ಕೆ ಧಾವಿಸಿ ಬಸ್ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತರಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.