
ಆಂಧ್ರಪ್ರದೇಶದ ಕೋತಪಟ್ಟಣಂನಲ್ಲಿ ಶಾಲೆಯ ಶೌಚಾಲಯದಲ್ಲಿಯೇ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಜನಿಸಿದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಮೃತಪಟ್ಟಿದೆ.
ಕೀಮಕುರ್ತಿ ಮಂಡಲದ ನಿವಾಸಿಯಾಗಿರುವ 16 ವರ್ಷದ ಬಾಲಕಿ ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ಓದುತ್ತಿದ್ದಾಳೆ. ಜೂನ್ 19ರಂದು ಶಾಲೆಗೆ ಸೇರಿದ ವಿದ್ಯಾರ್ಥಿನಿ ಪ್ರತಿದಿನ ಶಾಲೆಗೆ ಬರುತ್ತಿದ್ದಳು. ಗರ್ಭಿಣಿಯಾಗಿದ್ದ ಆಕೆ ಶಾಲೆಯ ಸಹಪಾಠಿಗಳಿಗೆ, ಶಿಕ್ಷಕರಿಗೆ ವಿಷಯ ತಿಳಿಸಿರಲಿಲ್ಲ.
ಗಂಟೆಗಟ್ಟಲೇ ಹೆರಿಗೆ ನೋವು ಅನುಭವಿಸಿದ ಬಳಿಕ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಜಾಸ್ತಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿ ಕ್ಲಾಸ್ ಗೆ ಬಾರದ ಕಾರಣ ಸಹಪಾಠಿಗಳು, ಶಿಕ್ಷಕರು ಶೌಚಾಲಯದ ಬಳಿ ಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರಪ್ರದೇಶದ ಓಂಗೋಲ್‌ನಲ್ಲಿರುವ RIMS ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ನವಜಾತ ಶಿಶು ಜನಿಸಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದೆ.