ನೆಲ್ಲೂರು: ಆಂಧ್ರಪ್ರದೇಶದಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಅರ್ಚಕನನ್ನು ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಟ್ರಾಫಿಕ್ ಇನ್ಸ್ ಪೆಕ್ಟರ್ ರಕ್ಷಿಸಿದ್ದಾರೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಪೊಲೀಸರ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಹೀರೋ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರಿನಲ್ಲಿರುವ ಕೊಡವಲೂರು ಶಿವ ದೇವಸ್ಥಾನದ ಅರ್ಚಕ ವೆಂಕಟೇಶ್ವರಪುರಂ ಸೇತುವೆ ಮೇಲೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಠಾತ್ ಪ್ರವಾಹದ ಸುಳಿಗೆ ಸಿಲುಕಿದ್ದಾರೆ. ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ, ಅರ್ಚಕರು ಸಹಾಯಕ್ಕಾಗಿ ಕೂಗಿದ್ದಾರೆ. ಕೂಡಲೇ ಅವರ ರಕ್ಷಣೆಗೆ ಧಾವಿಸಿದ ಟ್ರಾಫಿಕ್ ಸರ್ಕಲ್ ಇನ್ಸ್‌ಪೆಕ್ಟರ್ ನಾಯಕ್ ಅವರು ಹಗ್ಗವನ್ನು ಬಳಸಿ ಅರ್ಚಕರ ಬಳಿ ತಲುಪಿದ್ದಾರೆ. ಬಳಿಕ ನಾಯಕ್, ಅರ್ಚಕರನ್ನು ಬಿಗಿಯಾಗಿ ಹಿಡಿದುಕೊಂಡಿದ್ದು, ಪ್ರವಾಹದ ನೀರಿನ್ನು ದಾಟಿ ಸುರಕ್ಷಿತ ಸ್ಥಳಕ್ಕೆ ತಲುಪಿಸಿದ್ದಾರೆ.
ರಕ್ಷಣೆಯ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು,, ಅರ್ಚಕನನ್ನು ರಕ್ಷಿಸಲು ಟ್ರಾಫಿಕ್ ಇನ್ಸ್ ಪೆಕ್ಟರ್ ಪರಾಕ್ರಮಶಾಲಿ ಧೈರ್ಯಕ್ಕೆ ಜನರು ಶ್ಲಾಘಿಸಿದ್ದಾರೆ. ಇನ್ನು ವ್ಯಕ್ತಿಯ ಜೀವ ಉಳಿಸುವಲ್ಲಿ ಟ್ರಾಫಿಕ್ ಸಿಐ ಅವರು ತೋರಿದ ಶೌರ್ಯ ಹಾಗೂ ಬದ್ಧತೆಗೆ ಪೊಲೀಸ್ ಮಹಾನಿರ್ದೇಶಕ ಗೌತಮ್ ಸವಾಂಗ್ ಶ್ಲಾಘಿಸಿದ್ದಾರೆ.