alex Certify BREAKING NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕಿ ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅಮಾನತು ಮಾಡಲಾಗಿದೆ. ಪೀಣ್ಯದ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಬೆಂಗಳೂರು ಉತ್ತರ ಬಿಇಒ ಕೆ.ಜಿ.ಅಂಜನಪ್ಪ, ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಕ್ಲೀನ್ ಮಾಡಿಸಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿಯೂ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿರುವ ಘಟನೆ ನಡೆದಿದ್ದು, ಪೋಷಕರು, ಸ್ಥಳೀಯರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...