alex Certify BIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಕೇಸ್; ಮುಖ್ಯ ಶಿಕ್ಷಕಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾನತುಗೊಂಡಿದ್ದ ಮುಖ್ಯಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮೀ ದೇವಮ್ಮ ಬಂಧಿತರಾಗಿರುವ ಮುಖ್ಯಶಿಕ್ಷಕಿ. ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ. ಬಿಇಒ ಆಂಜಿನಪ್ಪ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಮುಖ್ಯಶಿಕ್ಷಕಿ ಲಕ್ಷ್ಮೀ ದೇವಮ್ಮ ಅವರನ್ನು ಅರೆಸ್ಟ್ ಮಾಡಲಾಗಿದೆ.

ಲಕ್ಷ್ಮೀ ದೇವಮ್ಮ ಅವರನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಬೆಂಗಳೂರಿನ ಪೀಣ್ಯದ ಅಂದ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಷಕರು, ಸಾರ್ವಜನಿಕರು ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...