
ಅಮರಾವತಿ: ಮುಂಬೈ ಮೂಲದ ಮಾಡೆಲ್ ಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ಆಂಧ್ರಪ್ರದೇಶದ ಅಮರಾವತಿಯಲ್ಲಿ ನಡೆದಿದೆ.
ಡೈರೆಕ್ಟರ್ ಜನರಲ್ ಶ್ರೇಣಿಯ ಇಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪಿಎಸ್ ಆರ್. ಆಂಜನೇಯಲು, ಕಂಠಿ ರಾಣಾ ಟಾಟಾ ಹಾಗೂ ವಿಶಾಲ್ ಗುನ್ನಿ ಮಾನತುಗೊಂಡಿರುವ ಅಧಿಕಾರಿಗಳು.
ಜಗಮ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಮುಂಬೈ ಮೂಲದ ಮಾಡೆಲ್ ಕಂ ನಟಿಯನ್ನು ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಆರೋಪದಲ್ಲಿ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ. ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ, ದುರ್ನಡತೆ ಆರೋಪದಡಿ ಅಮಾನತು ಮಾಡಲಾಗಿದೆ.