ರಸ್ತೆ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಮಾದೇಶ್ (50) ಸಾವನ್ನಪ್ಪಿದ ಘಟನೆ ಆನೇಕಲ್ನ ಹೊಸೂರು ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಬೈಕ್ನಲ್ಲಿ ಹೋಗುತ್ತಿದ್ದ ಸಬ್ಮಂಗಲ ನಿವಾಸಿ ಈ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ರಸ್ತೆ ಕಾಮಗಾರಿಗೆಂದು ತೋಡಲಾದ ಹೊಂಡ ಇದಾಗಿದ್ದು ಅಪೂರ್ಣ ಕಾಮಗಾರಿ ನಡೆಸಿ ಗುಂಡಿಯನ್ನು ಹಾಗೆಯೇ ಬಿಡಲಾಗಿತ್ತು. ಈ ರಸ್ತೆಯಲ್ಲಿ ಕಾಮಗಾರಿ ಆರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಹೀಗಾಗಿ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕೆಂದು ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದ್ರು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ದಿನೇಶ್, ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.