alex Certify ರಸ್ತೆ ಕಾಮಗಾರಿಗೆಂದು ತೋಡಲಾದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಕಾಮಗಾರಿಗೆಂದು ತೋಡಲಾದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಾವು

ರಸ್ತೆ ಕಾಮಗಾರಿಗೆಂದು ತೋಡಲಾಗಿದ್ದ ಗುಂಡಿಗೆ ಬಿದ್ದು ಬಿಜೆಪಿ ಮುಖಂಡ ಮಾದೇಶ್​ (50) ಸಾವನ್ನಪ್ಪಿದ ಘಟನೆ ಆನೇಕಲ್​ನ ಹೊಸೂರು ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಬೈಕ್​ನಲ್ಲಿ ಹೋಗುತ್ತಿದ್ದ ಸಬ್​ಮಂಗಲ ನಿವಾಸಿ ಈ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರಸ್ತೆ ಕಾಮಗಾರಿಗೆಂದು ತೋಡಲಾದ ಹೊಂಡ ಇದಾಗಿದ್ದು ಅಪೂರ್ಣ ಕಾಮಗಾರಿ ನಡೆಸಿ ಗುಂಡಿಯನ್ನು ಹಾಗೆಯೇ ಬಿಡಲಾಗಿತ್ತು. ಈ ರಸ್ತೆಯಲ್ಲಿ ಕಾಮಗಾರಿ ಆರಂಭವಾದಾಗಿನಿಂದ ಇಲ್ಲಿಯವರೆಗೆ ಸುಮಾರು 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹೀಗಾಗಿ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲೇಬೇಕೆಂದು ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದ್ರು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್​ ದಿನೇಶ್, ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...