
ಬೆಂಗಳೂರು: ಬೆಂಗಳೂರಿನ ಆನೇಕಲ್ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಭೂ ದಾಖಲೆಗಳ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ ಪಿ ಕ್ಯಾಪ್ಟನ್ ಅಯ್ಯಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ದಾಖಲೆಗಳ ಪರುಶೀಲನೆ ನಡೆಸಿದ್ದಾರೆ.
ಕಚೇರಿಯ ಬಾಗಿಲು ಬಂದ್ ಮಾಡಿ 15ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ಕಚೇರಿಯಲ್ಲಿ ಇಲ್ಲ ಎಂದು ತಿಳಿದುಬಂದಿದೆ.