ಕೊಪ್ಪಳ: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ನ. 8 ರಿಂದ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭವಾಗಲಿದ್ದು, ಪ್ರಾರಂಭಿಕ ಹಂತದಲ್ಲಿ ಎರಡು ಗಂಟೆಗಳು ಕಾರ್ಯನಿರ್ವಹಿಸಲಿವೆ. ಪ್ರಾಥಮಿಕ ಶಾಲೆಗಳು ಆರಂಭವಾದ ಬಳಿಕ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗುವುದು. ಮೊದಲ ವಾರ ಎರಡು ಗಂಟೆಗಳ ಕಾಲ ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸಲಿವೆ. ತಜ್ಞರ ವರದಿ ಆಧರಿಸಿ ಅಂಗನವಾಡಿ ಕೇಂದ್ರ ತೆರೆಯಲಾಗುವುದು. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.