alex Certify BIG NEWS: 1 -8 ನೇ ಕ್ಲಾಸ್ ಗೂ ಮೊದಲೇ ರಾಜ್ಯದಲ್ಲಿ ಅಂಗನವಾಡಿ ಆರಂಭಿಸಲು ಮುಂದಾದ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1 -8 ನೇ ಕ್ಲಾಸ್ ಗೂ ಮೊದಲೇ ರಾಜ್ಯದಲ್ಲಿ ಅಂಗನವಾಡಿ ಆರಂಭಿಸಲು ಮುಂದಾದ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ಕೊರೋನಾ ಕಾರಣದಿಂದ ಬಂದ್ ಆಗಿದ್ದ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಂಗನವಾಡಿಗಳನ್ನು ಆರಂಭಿಸಲು ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು, ಗ್ರಾಮ ಪಂಚಾಯಿತಿಗಳ ಮೂಲಕ ಅಂಗನವಾಡಿ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲು ತಿಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಅಂಗನವಾಡಿ ಕೇಂದ್ರದ ಆವರಣವನ್ನು ಸ್ವಚ್ಛಗೊಳಿಸಬೇಕು. ಕೇಂದ್ರದ ಪೀಠೋಪಕರಣ, ಶೌಚಾಲಯ ಶುಚಿಗೊಳಿಸುವುದು. ಮೂರರಿಂದ ಆರು ವರ್ಷದ ಮಕ್ಕಳಿಗೆ ಮಧ್ಯಾಹ್ನ 12 ಗಂಟೆಯವರೆಗೆ ಚಟುವಟಿಕೆ ಕೈಗೊಳ್ಳಬಹುದು. 3 ವರ್ಷದೊಳಗಿನ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿಗೆ ಬರದಂತೆ ನೋಡಿಕೊಳ್ಳುವುದು. ಕನಿಷ್ಠ 5 ಮಕ್ಕಳು ಹಾಜರಾಗಿರುವಂತೆ ನೋಡಿಕೊಳ್ಳಬೇಕಿದೆ. ಮಕ್ಕಳಿಗೆ ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ 1 -8 ನೇ ತರಗತಿ ಇನ್ನೂ ಆರಂಭವಾಗಿಲ್ಲ. ಇದಕ್ಕಿಂತ ಮೊದಲೇ ಅಂಗನವಾಡಿ ಆರಂಭಿಸಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...