ಬೆಂಗಳೂರು: ಫೆ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಗೂ ಮೊದಲೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ.
ಅಂಗನವಾಡಿ, ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈದೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.
ಬೆಳಿಗ್ಗೆ 11 ಗಂಟೆಯಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಆರಂಭಿಸಲಿದ್ದಾರೆ. ಪ್ರೋತ್ಸಾಹ ಧನಕ್ಕೆ ಒತ್ತಾಯ, ಆರ್ ಸಿ ಹೆಚ್ ಪೋರ್ಟಲ್ ಡಿಲಿಂಕ್ ಗೆ ಆಗ್ರಹ, ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 15,000 ರೂ ಪ್ರೋತ್ಸಾಹ ಧನ, ಮೊಬೈಲ್ ಕೆಲಸ ಮಾಡಲು ಸಾಧ್ಯವಾಗದವರಿಗೆ ಪರ್ಯಾಯ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಾಗಿ ಒತ್ತಾಯಿಸಿ ಧರಣಿ ಆರಂಭಿಸಲಿದ್ದಾರೆ.