ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.
ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು ಎಂದು ಹೇಳಲಾಗಿದೆ. ಅಂಗನವಾಡಿ ಕಾರ್ಯಕರ್ತೆಯ ನಿರ್ಲಕ್ಷಕ್ಕೆ ಮಗು ಮೃತಪಟ್ಟಿದೆ. ಅಂಗನವಾಡಿ ಪಕ್ಕದಲ್ಲಿರುವ ನೀರಿನ ತೊಟ್ಟಿಗೆ ಬಿದ್ದು ದುರಂತ ಸಂಭವಿಸಿದೆ. ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.