
ಶಿವಮೊಗ್ಗ: ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಕಾರ್ಯಕರ್ತೆಯ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ.
ಆಗಸ್ಟ್ 22ರಂದು ತಾಲೂಕಿನ ಪುರುಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬೈಲ್ ನಲ್ಲಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಕಳ್ಳನೊಬ್ಬ ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಶ್ರೀಮತಿ ಅವರನ್ನು ಬೆದರಿಸಿ 42 ಗ್ರಾಂ ತೂಕದ 3.20 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದಾನೆ.
ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಹೊಸನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.