ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ. ಹೀಗಾಗಿ ಆಧುನಿಕ ಮಾದರಿಯಲ್ಲಿ 17000 ಅಂಗನವಾಡಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.