
ತುಮಕೂರು: ಅಂಗನವಾಡಿಯಲ್ಲಿ ಕುಕ್ಕರ್ ಸ್ಫೋಟಗೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಯಡವನಹಳ್ಳಿಯಲ್ಲಿ ನಡೆದಿದೆ.
ಅಂಗನವಾಡಿಯಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಏಕಾಏಕಿ ಕುಕ್ಕರ್ ಸಿಡಿದಿದ್ದು, ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. 14 ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಗಾಯಾಳು ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ. ಸಿ.ಎಸ್.ಪುರ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.