ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆ ಕುಂದು ಕೊರತೆಗಳ ಕುರಿತಾಗಿ ಸಂಘಟನೆಗಳ ಪ್ರಮುಖರು, ಅಧಿಕಾರಿಗಳ ಜೊತೆಗೆ ಚರ್ಚಿಸಿದ ಸಚಿವರು ಭರವಸೆ ನೀಡಿದ್ದಾರೆ.
ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಬೇಡಿಕೆಗಳ ಕುರಿತಾಗಿ ಸಚಿವರು ಸಂಘಟನೆಗಳ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ.
ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಬಜೆಟ್ ನಲ್ಲಿ ಗೌರವ ಧನ ಹೆಚ್ಚಳಕ್ಕೆ ಪ್ರಯತ್ನಿಸಲಾಗುವುದು. ಉಳಿದ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಚರ್ಚಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.