alex Certify ಅಂಗನವಾಡಿ ಮಕ್ಕಳ ಮೊಟ್ಟೆ ವಂಚನೆ ಪ್ರಕರಣ: ಶಿಶು ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್; ಡಿಡಿಗೂ ನೋಟಿಸ್ ನೀಡಲು ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಮಕ್ಕಳ ಮೊಟ್ಟೆ ವಂಚನೆ ಪ್ರಕರಣ: ಶಿಶು ಅಭಿವೃದ್ಧಿ ಅಧಿಕಾರಿ ಸಸ್ಪೆಂಡ್; ಡಿಡಿಗೂ ನೋಟಿಸ್ ನೀಡಲು ಸೂಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ ನೀಡಿದ್ದಾರೆ.

ಇದೇ ಪ್ರಕರಣದಲ್ಲಿ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೂ (ಡಿಡಿ) ನೋಟೀಸ್ ನೀಡಲು ಸಚಿವರು ಸೂಚಿಸಿದ್ದಾರೆ.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮನಾತು ಮಾಡಲು ಸೂಚಿಸಿದ್ದರು. ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.

ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಅಂಗನವಾಡಿ ಮಕ್ಕಳ ತಟ್ಟೆಯಲ್ಲಿದ್ದ ಮೊಟ್ಟೆಯನ್ನು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಎತ್ತಿಕೊಂಡಿದ್ದು, ಸಹಿಸಲು ಸಾಧ್ಯವಿಲ್ಲ. ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು. ‌

ಚಿತ್ರೀಕರಣದ ಬಳಿಕ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸಪ್ ಗ್ರೂಪ್ ಗಳ ಮೂಲಕ ಅಪ್‌ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೋ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ.‌ ಇದೀಗ ವೀಡಿಯೋ‌ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.

69 ಸಾವಿರ ಅಂಗನವಾಡಿಗಳನ್ನ ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ‌ ಎಲ್ಲೋ ಒಂದು ಕಡೆ ಇಂತಹ ಘಟನೆ ನಡೆದರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ಪ್ರಕರಣ ಗಮನಕ್ಕೆ ದಂಬ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...