
ಹುಬ್ಬಳ್ಳಿ: ಅಕ್ರಮವಾಗಿ ಅಂಗನವಾಡಿ ಪೌಷ್ಠಿಕ ಆಹಾರಗಳನ್ನು ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು 26 ಜನರನ್ನು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಕಸಬಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು. ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ್ ಪತಿ ಫಾರುಖ್ ಗೆ ಸೇರಿದ ಗಬ್ಬೂರು ಬಳಿ ಗೋದಾಮಿನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಂಗನವಾಡಿಯ ಪೊಷ್ಠಿಕ ಆಹಾರ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿತ್ತು.
ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಅಂಗನವಾಡಿಯ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ 26 ಜನರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.