ನಂಜನಗೂಡು: ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮ ಮುಕ್ತಾಯವಾದ ನಂತರ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ನಂಜನಗೂಡಿನಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದ ಸಚಿವರು, ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಕೆಲಸ ನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವುದು. ಕಾರ್ಯಕ್ರಮ ಮುಗಿದ ನಂತರ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದ್ದಾರೆ.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಮಹಿಳೆಯರಿಗಾಗಿ ಹಲವು ಯೋಜನೆ ಜಾರಿಗೆ ತರಲಾಗಿದೆ. ಮೈಸೂರಿನಲ್ಲಿ ನಡೆಯುವ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.