ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಗ್ರಾಚುಟಿ ಮತ್ತು ಶಿಕ್ಷಕ ಸ್ಥಾನಮಾನಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದು ಮುಖ್ಯಮಂತ್ರಿಗಳ ಮನೆ ಅಥವಾ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.
15 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಸಂಘದ ಅಧ್ಯಕ್ಷ ವರಲಕ್ಷ್ಮಿ ತಿಳಿಸಿದ್ದಾರೆ. ಲಾಠಿಚಾರ್ಜ್, ಗೋಲಿಬಾರ್ ಆದರೂ ಸುಮ್ಮನಿರುವುದಿಲ್ಲ. ನಮ್ಮ ಹೋರಾಟ ಸರ್ಕಾರದ ಕಿವಿಗೆ ಬಿದ್ದಿಲ್ಲ. ಸಿಎಂ ಮನೆಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದೇವೆ. 10ನೇ ದಿನಕ್ಕೆ ಹೋರಾಟ ಕಾಲಿಟ್ಟಿದ್ದು, ಮಂಗಳವಾರ ಎರಡು ಬೇಡಿಕೆ ಈಡೇರಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ. ಉಳಿದ ಬೇಡಿಕೆಗಳನ್ನು ಪರಿಗಣಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಮನೆಗೆ ಮತ್ತಿಗೆ ಹಾಕಲು ಅಂಗನವಾಡಿ ನೌಕರರು ನಿರ್ಧರಿಸಿದ್ದಾರೆ.