ಕೊಪ್ಪಳ: ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 60 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಸಂಬಂಧ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮಹಿಳಾ ಅಭ್ಯರ್ಥಿಗಳು ಜಾಲತಾಣ www.anganwadirecruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ವಿವಿಧ ಕಾರಣಗಳಿಂದ ಖಾಲಿಯಾದ ಅಂಗನವಾಡಿ ಕಾರ್ಯಕರ್ತೆ ಮತ್ತು ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗೆ ಆರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಸ್ತುತ ಖಾಲಿಯಿರುವ ಹುದ್ದೆಗಳ ಪಟ್ಟಿಯನ್ನು ಸಂಬಂಧಪಟ್ಟ ಪುರಸಭೆ, ಪಟ್ಟಣ ಪಂಚಾಯತಿ, ಗ್ರಾಮ ಪಂಚಾಯತಿ, ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ, ಅಂಗನವಾಡಿ ಮುಂದೆ ಹಾಗೂ ತಾಲ್ಲೂಕು ಕಛೇರಿ ಮತ್ತು ತಹಶೀಲ್ದಾರ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು www.anganwadirecruit.kar.nic.in ವೆಬ್ಸೈಟ್ ಮುಖಾಂತರ ಸೆಪ್ಟೆಂಬರ್ 23 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.